ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ
admincoorgdaily
ಮಡಿಕೇರಿ :-ಪ್ರಸಕ್ತ (2025-26) ಸಾಲಿಗೆ ಎಸ್‍ಎಸ್‍ಎಲ್‍ಸಿ ಮತ್ತು 2ನೇ ವರ್ಷದ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ, ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಯನ್ನು ಮಂಜೂರು ಮಾಡಲು ತ್ರಿಪ್ರತಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯ ಮಾದರಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಇವರಿಂದ ಪಡೆದು ನವೆಂಬರ್, 15 ರೊಳಗೆ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.