ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಡಿಕೇರಿ ಜು.28:-ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಕರಣವು ದಿನಾಂಕ:01-08-2025 ರಿಂದ 31-07-2026 ರೊಳಗೆ ನಡೆದಿರಬೇಕು ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. 10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.
ಮಕ್ಕಳ ದಿನಾಚರಣೆ-2026 ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿ ಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ ಮಡಿಕೇರಿ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 20-08-2026 ರೊಳಗೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಕೋರಿದೆ. ದಿನಾಂಕದ ನಂತರ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-228010, 9482194105 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ ಅವರು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
