Kodagu

11 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

admincoorgdaily

ಮಡಿಕೇರಿ ಸ:-ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 11 ಗ್ರಾಮ ಪಂಚಾಯತ್‍ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಫ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ, ತೋಳೂರು ಶೆಟ್ಟಳ್ಳಿ, ವಿರಾಜಪೇಟೆ ತಾಲ್ಲೂಕಿನ ಕಾಕೋಟು ಪರಂಬು ಮತ್ತು ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್ ಐಡಿ :care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.