ಎಸ್‍ಎಫ್‍ಸಿ ಮುಕ್ತ ನಿಧಿ ಅನುದಾನದಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಎಸ್‍ಎಫ್‍ಸಿ ಮುಕ್ತ ನಿಧಿ ಅನುದಾನದಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ :-ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಎಸ್‍ಎಫ್‍ಸಿ ಮುಕ್ತ ನಿಧಿ ಅನುದಾನದಡಿ ವಿವಿಧ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಹ ಫಲಾನುಭವಿಗಳು ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಸಂಬಂಧಿಸಿದ ದೃಢೀಕೃತ ದಾಖಲಾತಿಗಳೊಡನೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 10 ರಂದು ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದು ಎಂದು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.