Sports News

ವಿವಿಧ ಕ್ರೀಡಾ ಪ್ರಶಸ್ತಿಗೆ ಅರ್ಜಿ ಆಹ್ವಾನ

admincoorgdaily

ವಿವಿಧ ಕ್ರೀಡಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ ಜು.28:-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಡಿಯಲ್ಲಿ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

 2025 ನೇ ವರ್ಷದಲ್ಲಿ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ, ನಗದು ಪುರಸ್ಕಾರ ಪ್ರಶಸ್ತಿ ಯೋಜನೆ, ಹಾಗೆಯೇ 2026-27ನೇ ಸಾಲಿಗೆ ಗುರಿ ಒಲಂಪಿಕ್ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಮುಂದುವರೆದು 2025-2026ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ ವಿದ್ಯಾರ್ಥಿ ವೇತನ ಯೋಜನೆಯಡಿ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ.

ಅರ್ಹ ಕ್ರೀಡಾ ಪಟುಗಳು ಅರ್ಜಿಯನ್ನು ಅಧಿಕೃತ ಜಾಲತಾಣ https://sevasindu.karnataka.gov.in ಮೂಲಕ ಕಡ್ಡಾಯವಾಗಿ ಆನ್‍ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸಹಾಯವಾಣಿ 155265 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.