ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ
ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿ ಪ್ರಸುತ್ತ 16 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಕರಿಕೆ, ಮಕ್ಕಂದೂರು, ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ, ಬಲ್ಯಮಂಡೂರು, ದೇವರಪುರ, ಕೆ.ಬಾಡಗ, ಕಿರುಗೂರು, ನಾಲ್ಕೇರಿ, ನಿಟ್ಟೂರು, ಪೊನ್ನಂಪೇಟೆ ಮತ್ತು ಟಿ.ಶೆಟ್ಟಿಗೇರಿ, ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟ, ದೊಡ್ಡಮಳ್ತೆ ಮತ್ತು ಗೌಡಳ್ಳಿ, ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಮತ್ತು ಕದನೂರು. ಆಸಕ್ತ ಪ್ರಾಂಚೈಸಿಗಳು ಈ ಕೆಳಕೆ ನೀಡಿದ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಆಗಸ್ಟ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಲಿಂಕ್ https://kal-mys.gramaone.karnataka.gov.in/ ಹೆಚ್ಚಿನ ಮಾಹಿತಿಗೆ care@blsinternationl.net ಈ ಮೇಲ್ ಐಡಿಯನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.