ವಿಪ್ರ ಸ್ವಉದ್ಯಮ ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಮಡಿಕೇರಿ:-ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವಉದ್ಯಮ ನೇರ ಸಾಲ ಯೋಜನೆಯಡಿ 2025-26 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ-ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು.
ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲ್ಯುಎಸ್ ಪ್ರಮಾಣ ಪತ್ರ) ಹೊಂದಿರಬೇಕು. (8 ಲಕ್ಷ ಆದಾಯ ಮಿತಿ). ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು.
ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಮಹಿಳೆಯರಿಗೆ ಶೇ.33, ವಿಶೇಷ ಚೇತನರಿಗೆ ಶೇ 5 ಮೀಸಲಾತಿಯನ್ನು ನೀಡಲಾಗುವುದು. ಅರ್ಜಿದಾರರ ಆಧಾರ್‍ಗೆ ಮೊಬೈಲ್ ಸಂಖ್ಯೆಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ. ವೆಬ್‍ಸೈಟ್ ksbdb.karnataka.gov.in ಲಿಂಕ್ ಮೂಲಕ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 8762249230 ಗೆ ಕರೆ ಮಾಡಿ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.