ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ

ಮಡಿಕೇರಿ :-ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ (ಪಿಎಂಎಂಎಸ್‍ವೈ) ಯೋಜನೆಯಡಿ (1.3)ಹೊಸ ಪಾಲನೆ ಕೊಳಗಳ ನಿರ್ಮಾಣ (ನರ್ಸರಿ/ ಮೀನುಮರಿ ಪಾಲನೆಕೊಳಗಳು) ಈ ಯೋಜನೆಯನ್ನು ಅನುಷ್ಠಾಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಉಪ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಫಲಾನುಭವಿಗಳಿಗೆ ಶೇಕಡ 40 ರಷ್ಟು ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸಚಿನ್ ಸಿ.ಎಸ್. ಅವರು ತಿಳಿಸಿದ್ದಾರೆ.