Kodagu

ವಸತಿ ಶಾಲೆ ನಿರ್ಮಿಸಲು ಅನುಮೋದನೆ: ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಧನ್ಯವಾದ ಸಲ್ಲಿಸಿದ ಡಾ ಮಂತರ್ ಗೌಡ

admincoorgdaily

ಸೋಮವಾರಪೇಟೆ;ತಾಲ್ಲೂಕಿನ ಚನ್ನಾಪುರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು 'ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ' ವತಿಯಿಂದ 6 ನೇ ತರಗತಿಯಿಂದ 12 ನೇ ತರಗತಿಯವರೆಗೆ ವಸತಿ ಶಾಲೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಸರ್ಕಾರದಿಂದ ಅನುಮೋದನೆ ಹಿನ್ನೆಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ.ಮಂತರ್ ಗೌಡ ರವರು ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಧನ್ಯವಾದಗಳನ್ನು ಅರ್ಪಿಸಿದರು.