2024 ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ

2024 ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ
ಪ್ರಶಸ್ತಿ ವಿಜೇತರು

ಮಡಿಕೇರಿ:-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು ಇದೇ ನವೆಂಬರ್ 30 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನಮಾಡಲಾಗುವುದು. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

 2024 ನೇ ಸಾಲಿನ ಪ್ರಶಸ್ತಿಗೆ ಅರೆಭಾಷೆ ಸಾಹಿತಿ ಹಾಗೂ ನಿಘಂಟು ತಯಾರಕರು ಆಗಿರುವ ಕೆ.ಆರ್. ಗಂಗಾಧರ, ಗ್ರಾಮೀಣ ಪತ್ರಿಕೋದ್ಯಮದಲ್ಲಿ ಕ್ರಾಂತಿ ಮಾಡಿರುವ ಡಾ.ಯು.ಪಿ. ಶಿವಾನಂದ ಹಾಗೂ ಅರೆಭಾಷಿಕರ ಸಂಘಟಕ ದಂಬೆಕೋಡಿ ಆನಂದ ಇವರುಗಳು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಜೊತೆಗೆ ಐನ್ ಮನೆ ಕುರಿತ ಅರೆಭಾಷೆ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ ಇದರೊಂದಿಗೆ ಅರೆಭಾಷೆ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮ ಹಾಗೂ ಅರೆಭಾಷೆ ಅಕಾಡೆಮಿ ಪ್ರಾಯೋಜಿತ ಅರೆಭಾಷೆ ನಾಟಕ 'ಅಪ್ಪ' ಪ್ರದರ್ಶನಗೊಳ್ಳಲಿದೆ ಎಂದು ಸದಾನಂದ ಮಾವಜಿ ತಿಳಿಸಿದ್ದಾರೆ.