ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅರುಣ್ ಮಾಚಯ್ಯ

Oct 1, 2025 - 22:38
 0  377
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅರುಣ್ ಮಾಚಯ್ಯ

ಮೈಸೂರು:ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ನೂತನವಾಗಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಚೆಪ್ಪುಡೀರ ಅರುಣ್ ಮಾಚಯ್ಯರವರು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು, ಮೈಸೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಜೊತೆಗಿದ್ದರು.

ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ, ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಮಾಡುತ್ತಿರುವ ಸಮಾರಂಭಕ್ಕೆ ಮುಖ್ಯಮಂತ್ರಿಗಳನ್ನು ಈ ಸಂಧರ್ಭದಲ್ಲಿ ಆಹ್ವಾನಿಸಿದರು. ಮುಖ್ಯಮಂತ್ರಿಗಳು ಅರುಣ್ ಮಾಚಯ್ಯರವರಿಗೆ ಆಶೀರ್ವದಿಸಿ, ಶುಭ ಕೋರಿದರು. ಈ ಸಂದರ್ಭದಲ್ಲಿ ಅರುಣ್ ಮಾಚಯ್ಯರವರ ಪುತ್ರ ವಿಶಾಲ್ ಅಯ್ಯಣ್ಣ ರವರು ಜೊತೆಗಿದ್ದರು.

What's Your Reaction?

Like Like 1
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 1