ಕೊಡಗು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಗೋಣಿಕೊಪ್ಪ ಮತ್ತು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಅರುಣ್ ಮಾಚಯ್ಯ ಅವರಿಗೆ ಸನ್ಮಾನ
ಗೋಣಿಕೊಪ್ಪ:ಕೊಡಗು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಗೋಣಿಕೊಪ್ಪ ಮತ್ತು ದ ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ರಿ. ಗೋಣಿಕೊಪ್ಪ ಇವರು ಜಂಟಿಯಾಗಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಚೆಪ್ಪುಡೀರ ಅರುಣ್ ಮಾಚಯ್ಯರವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದರು.
ಗೋಣಿಕೊಪ್ಪ ಹರಿಶ್ಚಂದ್ರಪುರದಲ್ಲಿರುವ ಗೋಣಿಕೊಪ್ಪ ಟ್ರೇಡರ್ಸ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಅರುಣ್ ಮಾಚಯ್ಯನವರಿಗೆ ಸನ್ಮಾನಿಸಿದ ಬಳಿಕ ಮಾತನಾಡಿದ ಮಾನ್ಯ ಶಾಸಕರು, ಈಗಾಗಲೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ತನ್ನ ಪ್ರಯತ್ನದಿಂದಾಗಿ ವಿರಾಜಪೇಟೆ ಕ್ಷೇತ್ರಾದ್ಯಂತ ಕ್ರೀಡಾ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ತರಲಾಗಿದೆ.
ನೂತನ ಕ್ರೀಡಾ ವಸತಿ ನಿಲಯಗಳು ತರಬೇತಿ ಕೇಂದ್ರಗಳು ನೂತನ ಮೈದಾನಗಳು ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಈಗಾಗಲೇ ಪ್ರಾರಂಭಿಸಿದ್ದು, ಮಾನ್ಯ ಅರುಣ್ ಮಾಚಯ್ಯನವರು ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕ್ಷೇತ್ರದ ಹಾಗೂ ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಪಂಚಾಯಿತಿ ಅಧ್ಯಕ್ಷರು ಕುಲ್ಲಚಂಡ ಪ್ರಮೋದ್ ಗಣಪತಿ, ಸುನಿಲ್ ಮಾದಪ್ಪ, ಗಿರೀಶ್ ಗಣಪತಿ, ಅರುಣ್ ಪೂಣಚ್ಚ, ಅಜಿತ್ ಅಯ್ಯಪ್ಪ, ಎ ಜೆ ಬಾಬು, ಅರವಿಂದ್ ಕುಟ್ಟಪ್ಪ, ಕೇಶವ್ ಕಾಮತ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
