ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಅರುಣ ಆನ್ಸಿ ಡಿಸೋಜ
ವಿರಾಜಪೇಟೆ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಇವರ ಹೆಸರಿನಲ್ಲಿ ನೀಡುತ್ತಿರುವ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಯನ್ನು ಬಿಳುಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗಣಿತ ಶಿಕ್ಷಕಿ ಅರುಣ ಆನ್ಸಿ ಡಿಸೋಜ ಅವರು ಭಾಜನರಾಗಿದ್ದು ಬೆಂಗಳೂರಿನ ಭಾರತದ ಜೋಡೋ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಇವರು ಶಿಕ್ಷಣ ಕ್ಷೇತ್ರದಲ್ಲಿ 27 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಇವರು ವಿರಾಜಪೇಟೆಯ ಗಾಡ್ವಿನ್ ಡಿಸೋಜ ಅವರ ಪತ್ನಿ. ನಿವೃತ್ತ ಶಿಕ್ಷಕರಾದ ಆಲ್ಬರ್ಟ್ ಡಿಸೋಜಾ ಹಾಗೂ ದಿವಂಗತ ಜುಲಿಯಾನ ಲೋಬೋ ಅವರ ಪುತ್ರಿ.