ಶಾಸಕ ಎಎಸ್ ಪೊನ್ನಣ್ಣ ನೇತೃತ್ವದಲ್ಲಿ ಸಿಎಂ ಭೇಟಿಯಾದ ಆಶ್ರಮ ಶಾಲೆಯ ಶಿಕ್ಷಕರು
ಬೆಂಗಳೂರು:ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಶ್ರಮ ಶಾಲೆಯ ಶಿಕ್ಷಕರುಗಳ ನಿಯೋಗವು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನಿವಾಸ ಕೃಷ್ಣ ದಲ್ಲಿ ಭೇಟಿಯಾದರು. ಮುಖ್ಯಮಂತ್ರಿಗಳಲ್ಲಿ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಹೇಳಿಕೊಂಡ ನಿಯೋಗದವರು, ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು. ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಎಲ್ಲವನ್ನೂ ಕೂಲಂಕುಶವಾಗಿ ಪರಿಶೀಲಿಸಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಮಾನ್ಯ ಬೈರತಿ ಸುರೇಶ್ ರವರು ಸಹ ಉಪಸ್ಥಿತರಿದ್ದರು.