ಹಿಂದೂ ಸಂಗಮ‌ ಕಾರ್ಯಕ್ರಮ ಪ್ರಚಾರದ‌ ವೇಳೆ ಹಲ್ಲೆ;ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಗಳಿಂದ ರಸ್ತೆ ತಡೆ

Feb 27, 2026 - 18:47
Feb 27, 2026 - 18:52
 0  2.3k
ಹಿಂದೂ ಸಂಗಮ‌ ಕಾರ್ಯಕ್ರಮ ಪ್ರಚಾರದ‌ ವೇಳೆ ಹಲ್ಲೆ;ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಗಳಿಂದ ರಸ್ತೆ ತಡೆ

ನಾಪೋಕ್ಲು; ನಾಳೆ ಬಲ್ಲಮಾವಟಿಯಲ್ಲಿ ಆಯೋಜಿಸಲಾದ ಬೃಹತ್ ಹಿಂದೂ ಸಮಾವೇಶ ಕಾರ್ಯಕ್ರಮದ ಅಂಗವಾಗಿ ಪಿಕ್ ಅಪ್ ವಾಹನದಲ್ಲಿ ಅನೌನ್ಸ್ಮೆಂಟ್ ತೆರಳುವ ವೇಳೆ ಹಲ್ಲೆ ನಡೆದಿರುವ ಘಟನೆ ನಡೆದಿದೆ.

ನಾಪೋಕ್ಲು ಪಟ್ಟಣದ ಪೊನ್ನಾಡ್ ಸೂಪರ್ ಮಾರ್ಕೆಟ್ ಮುಂಭಾಗದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಸಿದ್ದೀಕ್ ಇತರರಿಂದ ಹಲ್ಲೆ ಆರೋಪ ಕೇಳಿ ಬಂದಿದ್ದು.ಬಲ್ಲಮಾವಟಿ ನಿವಾಸಿ ಗೌತಮ್ ಹಾಗೂ ಇನ್ನೊಬ್ಬ ಕಾರ್ಯಕರ್ತನ ಮೇಲೆ ಗಂಭೀರ ಹಲ್ಲೆಯಾಗಿದ್ದು, ಹಲ್ಲೆಗೊಳಗಾದ ಗೌತಮ್ ಅನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ವಿರೋಧಿಸಿ ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಹಿಂದೂ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರ ಒತ್ತಾಯಿಸಿದ್ದಾರೆ.

What's Your Reaction?

Like Like 0
Dislike Dislike 1
Love Love 2
Funny Funny 1
Angry Angry 4
Sad Sad 2
Wow Wow 0