ನಾಪೋಕ್ಲುವಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳು ಅರೆಸ್ಟ್
admincoorgdaily

ಮಡಿಕೇರಿ;ನಾಪೋಕ್ಲುವಿನಲ್ಲಿ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ತಿಳಿಸಿದ್ದಾರೆ.
ಹಿಂದೂ ಸಂಗಮದ ಪ್ರಚಾರ ಕಾರ್ಯದ ಸಂದರ್ಭ ಗೌತಮ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಸಿದ್ದಿಕ್, ಸುಹೈಲ್, ನಾಫಿ ಹಾಗೂ ರಾಶಿದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಹಿಂದೂ ಪರ ಸಂಘಟನೆಗಳು ಇಂದು ಮಧ್ಯಾಹ್ನದ ಗಡುವು ನೀಡಿದ್ದವು. ಅದರ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.