ಗಮನಸೆಳೆದ ಹಿರಿಯ ನಾಗರಿಕರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆ

ಮಡಿಕೇರಿ:-ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಗರದ ಜನರಲ್ ಜಿಲ್ಲಾ ತಿಮ್ಮಯ್ಯ ಕ್ರೀಡಾಂಗಣದ ಬಳಿ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳು ನಡೆದವು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟನೆ ನೆರವೇರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಕ್ರೀಡೆಯಲ್ಲಿ 60 ರಿಂದ 69 ವಯೋಮಿತಿಯ ಪುರುಷ ಹಾಗೂ ಮಹಿಳೆಯರಿಗೆ ಬಿರುಸಿನ ನಡಿಗೆ, ಮ್ಯೂಸಿಕಲ್ ಚೇರ್ ಹಾಗೆಯೇ ಬಕೆಟಿಗೆ ಬಾಲ್ ಎಸೆಯುವ 70 ರಿಂದ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಪುರುಷ ಹಾಗೂ ಮಹಿಳೆಯರಿಗೆ ಮ್ಯೂಸಿಕಲ್ ಚೇರ್ ಬಕೇಟಿಗೆ ಬಾಲ್ ಹಾಕುವ ಕ್ರೀಡೆ ನಡೆಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಏಕಪಾತ್ರ ಅಭಿನಯ ಗಾಯನ ಸ್ಪರ್ಧೆ ನಡೆಯಿತು. 60 ರಿಂದ 69 ವಯಸ್ಸು ಮತ್ತು 70 ರ ಮೇಲ್ಪಟ್ಟ ವಯಸ್ಸಿನ ವಿಭಾಗವಾರು ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸಲಾಯಿತು. ಹಿರಿಯ ನಾಗರಿಕರಿಗೆ ಆಯುಷ್ ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಸಿ.ಕೆ.ಮಲ್ಲಪ್ಪ, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷರಾದ ಸುರೇಶ್, ಹಿರಿಯ ನಾಗರಿಕರ ವೇದಿಕೆಯ ಶಂಕರಿ ಪೆÇನ್ನಪ್ಪ, ಮಡಿಕೇರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಮಾದಮಯ್ಯ, ಜಿಲ್ಲಾ ಆಯುμï ಅಧಿಕಾರಿ ಶೈಲಜಾ, ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ವಿಮಲಾ ಹಾಗೂ ಜಿಲ್ಲೆಯಲ್ಲಿ ಇರುವ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಮತ್ತು ಕಚೇರಿ ಸಿಬ್ಬಂದಿಗಳು ಹಾಜರಿದ್ದರು.