ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಗಮನಕ್ಕೆ
admincoorgdaily

ಮಡಿಕೇರಿ ಜೂ.04:-ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳಿಗೆ ಜೀವಂತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಮಾಡಬೇಕೆಂದು ಸಂಸ್ಥೆಗಳು ಹಾಗೂ ಕೆಲವು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಪ್ರಮಾಣ ಪತ್ರ ಮಾಡಿಸಲು ಹಣ ವಸೂಲು ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಜೀವಂತ ಪ್ರಮಾಣ ಪತ್ರವನ್ನು ಮಾಡಿಸುವ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಸ್ವೀಕೃತವಾಗಿರುವುದಿಲ್ಲ. ಆದ್ದರಿಂದ ಅಧಿಕೃತ ಆದೇಶ ಬಂದ ಕೂಡಲೇ ನಿರ್ದೇಶನ ನೀಡಲಾಗುವುದು. ಫಲಾನುಭವಿಗಳು ಸಹಕರಿಸುವಂತೆ ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.