Kodagu

ಅಸ್ಸಾಂ ಮೂಲದ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ

admincoorgdaily

ಸೋಮವಾರಪೇಟೆ:ಶಾಂತಳ್ಳಿ ಹೋಬಳಿಯ ಅಬ್ಬಿಮಠ ಬಾಚಳ್ಳಿ ಗ್ರಾಮದಲ್ಲಿ ಸ್ಥಳೀಯ ಆಟೋ ಚಾಲಕನ ಮೇಲೆ ಅಸ್ಸಾಂ ಮೂಲದ ಮೂವರು ಕಾರ್ಮಿಕರಿಂದ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಅಬ್ಬಿಮಠ ಬಾಚಳ್ಳಿಯ ರಾಮಪ್ಪ ಅವರ ಮನೆಯಲ್ಲಿ ಕಾರ್ಮಿಕರಾಗಿದ್ದ ಅಸ್ಸಾಂ ಮೂಲದ ಮೂವರು ಯುವಕರು, ಆಟೋ ಚಾಲಕನೊಂದಿಗೆ ವಾಗ್ವಾದ ತೊಡಗಿಕೊಂಡು ನಂತರ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

 ಗಾಯಗೊಂಡ ಚಾಲಕನನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ.