ಎಸ್.ಎಂ ಮುಬಾರಕ್ ಗೆ ಪ್ರಶಸ್ತಿ ಪ್ರದಾನ

Feb 10, 2026 - 10:58
 0  172
ಎಸ್.ಎಂ ಮುಬಾರಕ್ ಗೆ ಪ್ರಶಸ್ತಿ  ಪ್ರದಾನ

ಮಡಿಕೇರಿ:- ಕರ್ನಾಟಕ ತಮಿಳು ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ತಮಿಳು ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ ಹಿರಿಯ ಪತ್ರಕರ್ತ ಎಸ್ ಎಂ ಮುಬಾರಕ್ ಸೇರಿದಂತೆ ವಿವಿಧ ಜಿಲ್ಲೆಗಳ 8 ಮಂದಿ ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು .

 ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಇನ್ಸ್ಟಿಟ್ಯೂಷನ್ ಆಫ್ ಅಗ್ರಿಕಲ್ಚರಲ್ ಟೆಕ್ನಾಲಜಿಸ್ಟ್ಸ್ ಸಂಸ್ಥೆಯ ಸಭಾಂಗಣದಲ್ಲಿ ಪತ್ರಿಕೋದ್ಯಮ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾದ್ ಮನೋಹರ್ , ಪ್ರೊಫೆಸರ್ ಸರಸ್ವತಿ, ಕರ್ನಾಟಕ ತಮಿಳು ಪತ್ರಕರ್ತರ ಸಂಘದ ಅಧ್ಯಕ್ಷ ಮುತ್ತುಮಣಿ ಸೇರಿದಂತೆ ಗಣ್ಯರು ಹಾಜರಿದ್ದರು. (ಕಳೆದ 20 ವರ್ಷಗಳಿಂದಲೂ ಪತ್ರಿಕೋದ್ಯಮದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಬಹುಭಾಷಾ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದಾರೆ.

ಜಿಲ್ಲೆ ,ರಾಜ್ಯ ,ರಾಷ್ಟ್ರೀಯ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಎಸ್ಎಂ ಮುಬಾರಕ್ ವೃತ್ತಿಯೊಂದಿಗೆ ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿರುವ ಇವರಿಗೆ ವಿವಿಧ ಸಂಘ ಸಂಸ್ಥೆಗಳಿಂದಲೂ ಸನ್ಮಾನ ಗೌರವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0