ನಿಡ್ತ ಪ್ರೌಢಶಾಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ವಿದ್ಯಾರ್ಥಿಗಳಿಗೆ ಜಾಗೃತಿ
ಶನಿವಾರಸಂತೆ :ಸರ್ಕಾರಿ ಪ್ರೌಢಶಾಲೆ ನಿಡ್ತ ದಲ್ಲಿ ಪರಿಸರ ಸ್ನೇಹಿ ಗಣೇಶ ತಯಾರಿಸುವುದು ರೊಂದಿಗೆ ಗಣೇಶ ಚತುರ್ಥಿ ಆಚರಣೆ ಮಾಡಲು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಶಿಕ್ಷಕರಾದ ಶ್ರೀಮತಿ ನಳಿನಿ ಎಂ ಸಿ ರವರು ಪರಿಸರ ಸ್ನೇಹಿ ಗಣೇಶೋತ್ಸವದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ವೃಂದದವರು ಹಾಜರಿದ್ದರು.