ಮಾಯಮುಡಿ: ಸಾರ್ವಜನಿಕರಿಗೆ ವಿವಿಧ ಯೋಜನೆಯ ಬಗ್ಗೆ ಅರಿವು ಕಾರ್ಯಕ್ರಮ
ಪೊನ್ನಂಪೇಟೆ: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕೆನರಾಬ್ಯಾಂಕ್ ಮಾಯಮುಡಿ ಇವರ ಸಹಯೋಗದೊಂದಿಗೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಪಂಚಾಯತಿಯ ಸಹಕಾರದೊಂದಿಗೆ ,ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀವರ್ಷ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವು ಮಾಯಮುಡಿ ಗ್ರಾಮದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕರು , ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಅಪಘಾತವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು.
ಹಾಗೂ ವಾರ್ಷಿಕವಾಗಿ 436 -ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಪೇಡೆಯ ಬಹುದು ಈ ಎರಡು ಯೋಜನೆ ಮಾಡಿಸಿಕೊಂಡಲ್ಲಿ 400000/-ರೂ ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು.ಅಲ್ಲದೆ 60ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈ ವಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ನಂತರದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಎನ್ನುವ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೋಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಅವಾರ್ಡ್ ಸಂಸ್ಥೆಯ ಆರ್ಥಿಕ ಸಮಾಲೋಚಕರಾಗಿರುವ ಅನಿಲ್ ರವರು ತಿಳಿಸಿದರು.
ಮಾಯಮುಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಟಾಟು ಮೊಣ್ಣಪ್ಪ ನವರು ಮಾತನಾಡಿ ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು . ವೇದಿಕೆಯಲ್ಲಿ ಮಾಯಮುಡಿ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿ ರವಿ ಮತ್ತು ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ಪ್ರಿಯಾಂಕಾ ರಾಜ್ ಅವಾರ್ಡ್ ಸಂಸ್ಥೆಯ ತಾಲೂಕು ಆರ್ಥಿಕ ಸಮಾಲೋಚಕರಾದ ಅನಿಲ್ ರವರು ಉಪಸ್ಥಿತರಿದ್ದರು. ನೌಫಲ್