ಪಾರಾಣೆ ಪ್ರೌಢಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಾರ

Feb 2, 2026 - 10:34
 0  279
ಪಾರಾಣೆ ಪ್ರೌಢಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಾರ

ವರದಿ:ಝಕರಿಯ ನಾಪೋಕ್ಲು

 ನಾಪೋಕ್ಲು:ನಾಪೋಕ್ಲು ಬಳಿಯ ಪಾರಾಣೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾದ ಬೇಟಿ ಬಚಾವೋ ಬೇಟಿ ಪಡಾವೋ ಅರಿವು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಪಾಲ್ಗೊಂಡು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆಯನ್ನು ಅಲಂಕರಿಸಿಕೊಳ್ಳಬೇಕು. ಓದುವ ವಯಸ್ಸಿನಲ್ಲಿ ಯಾವುದೇ ಆಕರ್ಷಣೆಗಳಿಗೆ ಒಳಗಾಗದೆ ಓದಿನೆಡೆಗೆ ಗಮನಹರಿಸಬೇಕೆಂದರು.

ಬಳಿಕ ಬಾಲ ಗರ್ಭಿಣಿ, ಸುರಕ್ಷಿತ ಮತ್ತು ಅಸುರಕ್ಷಿತ ಸ್ವರ್ಶಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿ ಮಕ್ಕಳು ಯಾವುದೇ ದೌರ್ಜನ್ಯಕ್ಕೆ ಒಳಗಾದರೆ ಮಕ್ಕಳ ಸಹಾಯವಾಣಿ 1098ಸಂಖ್ಯೆಗೆ ಮಾಹಿತಿ ನೀಡುವಂತೆ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಮಿಷನ್ ಶಕ್ತಿ ಸಂಯೋಜಕರಾದ ಮಮತ ಅವರು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಮಾತನಾಡಿ ಹೆಣ್ಣು ಮಕ್ಕಳನ್ನು ರಕ್ಷಿಸಿ ಉತ್ತಮ ಶಿಕ್ಷಣನೀಡಬೇಕು. ಅದರಂತೆ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಬೇಕು.

 ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಸಮಾನತೆ ನೀಡಬೇಕೆಂದು ತಿಳಿಸಿದರು. ಬಾಲ್ಯ ವಿವಾಹ, ಮಕ್ಕಳ ಹಕ್ಕುಗಳ ಕುರಿತು ಹೆಣ್ಣು ಮಕ್ಕಳಿಗೆ 18 ವರ್ಷ ತುಂಬಿದ ನಂತರ ಗಂಡು ಮಕ್ಕಳಿಗೆ 21 ವರ್ಷ ತುಂಬಿದ ನಂತರ ವಿವಾಹ ಆಗಬೇಕು ಎಂದು ತಿಳಿಸಿದರು.

ಅಕ್ಕಪಡೆ ಯೋಜನೆ ಕುರಿತು ಮಾಹಿತಿ ನೀಡಿದ ಅವರು ಈ ಯೋಜನೆಯು ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಉದ್ದೇಶದಿಂದ ಯೋಜನೆಯನ್ನು ಜಾರಿಗೆತರಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕಿ ರಜನಿ, ಶಿಕ್ಷಕರಾದ ಅಖಿಲ, ಡಯಾನ, ಮಂಜುಸೋಮಣ್ಣ, ಅಂಗನವಾಡಿ ಕಾರ್ಯಕರ್ತೆ ರೋಹಿಣಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0