ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಇನ್ಕ್ಯುಬೇಷನ್ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಾರ

Nov 29, 2025 - 00:17
 0  135
ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಇನ್ಕ್ಯುಬೇಷನ್ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಾರ

ಕುಶಾಲನಗರ,ನ28: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ‌ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಫೌಂಡೇಶನ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕುಶಾಲನಗರದ ಇಂಜಿನಿಯರಿಂಗ್ ಕಾಲೇಜು ಇವರ ಸಂಯುಕ್ತಾಶ್ರದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ "ರೈಸಿಂಗ್ ಆಂಡ್ ಅಕ್ಸೆಲೆರೇಷನ್ ಎಮ್.ಎಸ್.ಎಮ್.ಇ ಫರ್ಫೋಮೆನ್ಸ್" (RAMP) ರಡಿ ಇನ್ಕ್ಯುಬೇಷನ್ ಯೋಜನೆ ಕುರಿತು ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಾರವು ಕುಶಾಲನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ‌ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಮ್.ಎಸ್.ಎಮ್.ಇ ಯ ನಿವೃತ ಉಪನಿರ್ದೇಶಕರಾದ ಆರ್.ಗೋಪಿನಾಥ್ ರಾವ್ ಅವರು, ವಿದ್ಯಾರ್ಥಿಗಳಿಗೆ ವಿವರವಾಗಿ ತಾಂತ್ರಿಕ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ‌ ನಿರ್ದೇಶಕರಾದ ಕೆ.ಹನುಮಂತರಾಯ ಅವರು ನೆರವೇರಿಸಿದರು.

ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ಡಾ.ಪರಶಿವಮೂರ್ತಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾದ್ಯಾಪಕರುಗಳಾದ ಡಾ.ಎಸ್.ಎನ್.ಸತೀಶ್, ಡಾ.ಸೀನಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರಾದ ಸಿ.ಎನ್.ರಘು ಹಾಗೂ ವಿದ್ಯಾರ್ಥಿಗಳು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0