ಶಾಸಕ ಎ‌ಎಸ್ ಪೊನ್ನಣ್ಣ ಅವರ ನಿವಾಸದಲ್ಲಿ ಆಯುಧ ಪೂಜೆ

ಶಾಸಕ ಎ‌ಎಸ್ ಪೊನ್ನಣ್ಣ ಅವರ ನಿವಾಸದಲ್ಲಿ ಆಯುಧ ಪೂಜೆ

ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಮನೆಯಲ್ಲಿ ಇಂದು ಆಯುಧ ಪೂಜೆ ಕಾರ್ಯಕ್ರಮ ನಡೆಯಿತು. ಶಾಸಕರ ಗೃಹ ಕಚೇರಿಯಲ್ಲಿ ಆಯುಧ ಪೂಜೆಯ ಕಾರ್ಯಕ್ರಮ ನೆರವೇರಿಸಿ ಪ್ರಸಾದ ವಿತರಿಸಲಾಯಿತು. ಬಳಿಕ ಸಾಂಪ್ರದಾಯಿಕವಾಗಿ ಎಲ್ಲಾ ವಾಹನಗಳನ್ನು ಸ್ವಚ್ಛಗೊಳಿಸಿ, ಬಳಿಕ ಅಲಂಕರಿಸಿದ ವಾಹನಗಳನ್ನು ಪೂಜಿಸುವ ಮೂಲಕ ಭಗವಂತನಲ್ಲಿ ಸರ್ವರಿಗೂ ಶುಭವನ್ನುಂಟುಮಾಡಿ ಸುರಕ್ಷತೆಗಾಗಿ ಪ್ರಾರ್ಥಿಸಲಾಯಿತು .

ಈ ಸಂದರ್ಭದಲ್ಲಿ ಮಾನ್ಯ ಶಾಸಕರ ಆಪ್ತ ಬಳಗದ ಸಿಬ್ಬಂದಿ ವರ್ಗದವರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.