ಕರ್ನಾಟಕ ರಕ್ಷಣಾ ವೇದಿಕೆ(ಎಚ್.ಶಿವರಾಮೇಗೌಡರ ಬಣ) ಕೊಡಗು ಜಿಲ್ಲಾಧ್ಯಕ್ಷರಾಗಿ ಬಿಎ ದಿನೇಶ್ ನೇಮಕ
ಮಡಿಕೇರಿ: ಕರ್ನಾಟಕ ರಕ್ಷಣಾ ವೇದಿಕೆ(ಎಚ್.ಶಿವರಾಮೇಗೌಡರ ಬಣ) ಜಿಲ್ಲಾಧ್ಯಕ್ಷರಾಗಿ ಬಿ.ಎ.ದಿನೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ವೇದಿಕೆಯ ವಿರಾಜಪೇಟೆ ತಾಲೂಕು ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲೆಯ ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ತಾಲೂಕಿನ ಪದಾಧಿಕಾರಿಗಳು ಬಿ.ಎ.ದಿನೇಶ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಕುಶಾಲನಗರ, ಪೊನ್ನಂಪೇಟೆ ತಾಲೂಕಿಗೆ ಪದಾಧಿಕಾರಿಗಳ ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ನೂತನ ಅಧ್ಯಕ್ಷ ಬಿ.ಎ.ದಿನೇಶ್ ಮಾತನಾಡಿ, ಜಿಲ್ಲೆಯಲ್ಲಿ ಕರವೇ ಸಕ್ರಿಯವಾಗಿ ಅನ್ಯಾಯದ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿದೆ. ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆಯಲ್ಲಿ ಕರವೇ ಹೋರಾಟದಲ್ಲಿ ತೊಡಗಿಸಿಕೊಂಡಿದೆ. ಮುಂದಿನ ದಿನಗಳಲ್ಲಿಯೂ ಕನ್ನಡಕ್ಕೆ ಅನ್ಯಾಯ, ಧಕ್ಕೆಯಾದ ಸಂದರ್ಭದಲ್ಲಿ ಕರವೇ ಹೋರಾಟದಲ್ಲಿ ತೊಡಗಿಸಿಕೊಳ್ಳಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಪ್ರಾನ್ಸಿಸ್ ಡಿಸೋಜಾ, ಮಡಿಕೇರಿ ತಾಲೂಕು ಅಧ್ಯಕ್ಷ ರವಿಗೌಡ, ಉಪಾಧ್ಯಕ್ಷ ನಾಗೇಶ್, ಜಿಲ್ಲಾ ಸಮಿತಿ ಸದಸ್ಯ ಗೋವಿಂದರಾಜ್ ದಾಸ್ ಇದ್ದರು.
