State News

11 ಲಕ್ಷ ರೂ ಲಂಚಕ್ಕೆ ಬೇಡಿಕೆ; ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಬಿಜೆಪಿ ಶಾಸಕ

admincoorgdaily

ಬಿಜೆಪಿ ಶಾಸಕ ಚಂದ್ರು ಲಮಾಣಿ

ಗದಗ, ಫೆಬ್ರವರಿ 21: ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ (bjp) ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.

11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5 ಲಕ್ಷ ರೂ ಕಮಿಷನ್ ಪಡೆಯುವಾಗ ಶಾಸಕ ಸೇರಿದಂತೆ ಪಿಎಗಳಾದ ಮಂಜುನಾಥ್ ಮತ್ತು ಗುರು ಸಿಕ್ಕಿಬಿದ್ದಿದ್ದು, ಮೂವರನ್ನು ವಶಕ್ಕೆ ಪಡೆದು ಲೋಕಯುಕ್ತ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಇನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಚಂದ್ರು ಲಮಾಣಿಗೆ ಸೇರಿದ ಬಾಲಾಜಿ ಆಸ್ಪತ್ರೆ ಮೇಲೂ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ಮಾಡಿದೆ. ಲೋಕಾಯುಕ್ತ ಎಸ್​ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.