ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ-ಸಾಧಕಿ ಶೈಲಾ ಮೊಣ್ಣಪ್ಪಾಗೆ ಸನ್ಮಾನ
admincoorgdaily

ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು :ಮಡಿಕೇರಿ ಬಿಜೆಪಿ ಕಚೇರಿಯಲ್ಲಿ ಗ್ರಾಮಾಂತರ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿದ ಹಾಗೂ ಕೊಡಗಿನ ಪ್ರಥಮ ಆಟೋ ಚಾಲಕಿ ಪಾಂಡನ ಶೈಲಾ ಮೊಣ್ಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿದ ಬಳಿಕ ಪಾಂಡನ ಶೈಲಾ ಮೊಣ್ಣಪ್ಪ ಅವರು ತಮ್ಮ ಸಾಧನೆಯ ಬಗ್ಗೆ ವಿವರಿಸಿ ಕೃತಜ್ಞತೆ ಸಲ್ಲಿಸಿದರು.
ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಕುಮುದ ರಶ್ಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ವಿನಿರಾಯ್,ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕವಿತಾ ಬೆಳ್ಯಪ್ಪ,ಉಮಾ ಪ್ರಭು,ಮಹಿಳಾ ಮೋರ್ಚಾದ ಸರ್ವ ಸದಸ್ಯರು ಹಾಜರಿದ್ದರು. ಉಮಾಪ್ರಭು ಸ್ವಾಗತಿಸಿ, ವಿನಿರಾಯ್ ಸರ್ವರನ್ನು ವಂದಿಸಿದರು.