ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಡಗಿನ ಅಬ್ದುಲ್ ರೆಹಮಾನ್ ಎನ್‌ಐಎ ವಶಕ್ಕೆ

ಮಡಿಕೇರಿ:ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ವಿದೇಶಲ್ಲಿ ತಲೆ ಮರೆಸಿಕೊಂಡಿದ್ದ ಎನ್ನಲಾದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲಂದರ್ ನನ್ನು ಎನ್.ಐ.ಎ ಅಧಿಕಾರಿಗಳು ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಹತ್ಯೆ ಪ್ರಕರಣದಲ್ಲಿ 21 ನೇ ಆರೋಪಿ ಯಾಗಿದ್ದ ಅಬ್ದುಲ್ ರೆಹಮಾನ್ ಘಟನೆ ಬಳಿಕ ವಿದೇಶದಲ್ಲಿ ತಲೆಮಾರೆಸಿಕೊಂಡಿದ್ದ. ಈ ಬಗ್ಗೆ ಎನ್.ಐ.ಎ ಅಧಿಕಾರಿಗಳು ತೀವ್ರ ಶೋಧ ನಡೆಸಿದ ಬಳಿಕ ಮಾಹಿತಿ ಅಬ್ದುಲ್ ರೆಹಮಾನ್ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಸಹ ಘೋಷಣೆ ಮಾಡಲಾಗಿತ್ತು. ಇದೀಗ ಬಂಧನಕ್ಕೆ ಒಳಗಾಗಿರುವ ರೆಹಮಾನ್ ನನ್ನು ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯ ಕ್ಕೆ ಹಾಜರೂಪಡಿಸಲಾಗಿದೆ.
What's Your Reaction?






