ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ:4 ವರ್ಷಗಳ ಬಳಿಕ ಸೋಮವಾರಪೇಟೆಯ ಅಬ್ದುಲ್ ನಾಸೀರ್ ಬಂಧನ
ಕೊಚ್ಚಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಬ್ದುಲ್ ನಾಸೀರ್(41),ಕೊಡಗು ಜಿಲ್ಲೆ, ಸೋಮವಾರಪೇಟೆ, ನೌಷದ್(32) ಬೆಳ್ತಂಗಡಿ ಬಂಧಿತರು. ಕೃತ್ಯ ಎಸಗಿದ ಬಳಿಕ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ ಎಂದು NIA ತಿಳಿಸಿದೆ.
ಪ್ರಕರಣದ ಹಿನ್ನೆಲೆ:26-07-2022 ರಂದು ರಾತ್ರಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತನಿಖೆ ನಡೆಸುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಕೊಚ್ಚಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದೆ. 4 ವರ್ಷಗಳ ಬಳಿಕ ಈ ಬಂಧನವಾಗಿದ್ದು, ತನಿಖೆ ಮತ್ತಷ್ಟು ಚುರುಕುಗೊಂಡಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

