ಮಡಿಕೇರಿಯಲ್ಲಿ ಕಾಂಗ್ರೆಸ್ ‌ವಿರುದ್ಧ ಬಿಜೆಪಿ ಪ್ರತಿಭಟನೆ

Jul 24, 2026 - 17:37
 0  263
ಮಡಿಕೇರಿಯಲ್ಲಿ ಕಾಂಗ್ರೆಸ್ ‌ವಿರುದ್ಧ ಬಿಜೆಪಿ ಪ್ರತಿಭಟನೆ

ಮಡಿಕೇರಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಮುಂದಿಟ್ಟು ಕಾಂಗ್ರೆಸ್ ಅರಾಜಕತೆ ಸೃಷ್ಟಿ ಮಾಡುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

 ಹಳೆಯ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕಾಂಗ್ರೆಸ್ ಕಚೇರಿ ಕಡೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ನಂತರ ಅವರನ್ನು ಮೈತ್ರಿಹಾಲ್‌ಗೆ ಸ್ಥಳಾಂತರಿಸಿ ಬಿಡುಗಡೆಗೊಳಿಸಲಾಯಿತು.

ಪ್ರತಿಭಟನಾ ಸಂದರ್ಭ ಮಾಜಿ ಸ್ಪೀಕರ್ ಮತ್ತು ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಕೇಂದ್ರವೇ ಮೊದಲು ತಪ್ಪನ್ನು ಪತ್ತೆಹಚ್ಚಿ ಪರೀಕ್ಷೆ ರದ್ದು ಮಾಡಿ ಮರುಪರೀಕ್ಷೆ ನಡೆಸಿತು. ವಿದ್ಯಾರ್ಥಿಗಳ ಹಿತ ಕಾಪಾಡಿದೆ. ಆದರೆ, ಕಾಂಗ್ರೆಸ್ ಇದನ್ನೇ ಆಯುಧ ಮಾಡಿಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ. ಕೆಪಿಎಸ್‌ಸಿ ಸೋರಿಕೆಯಾದಾಗ ಮಾತಾಡದವರು ಇಂದು ನೈತಿಕತೆ ಬಗ್ಗೆ ಪಾಠ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

 ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನಿಲ್ ಸುಬ್ರಮಣಿ, ಮೇದಪ್ಪ, ಪ್ರಮುಖರಾದ ಅರುಣ್ ಕುಮಾರ್, ಅನಿತಾ ಪೂವಯ್ಯ, ಕಲಾವತಿ, ಮಹೇಶ್ ಜೈನಿ, ವಿ.ಕೆ.ಲೋಕೇಶ್, ಎಡಕೇರಿ ಪ್ರಸನ್ನ ಇತರರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0