ದುರಸ್ತಿ ಹಂತದ ರಸ್ತೆಗಳಲ್ಲೇ ಬಿಜೆಪಿ ಬಾಳೆಗಿಡ ನೆಟ್ಟು ಪ್ರತಿಭಟನೆ: ಭಾಗಮಂಡಲ ವಲಯ ಕಾಂಗ್ರೆಸ್ ಆಕ್ಷೇಪ
ಮಡಿಕೇರಿ: ದುರಸ್ತಿ ಹಂತದ ರಸ್ತೆಗಳಲ್ಲೇ ಬಿಜೆಪಿ ಬಾಳೆಗಿಡ ನೆಟ್ಟು ಪ್ರತಿಭಟನೆ ಮಾಡಿದ್ದಕ್ಕೆ ಭಾಗಮಂಡಲ ವಲಯ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದು ಶಾಸಕ ಎ.ಎಸ್.ಪೊನ್ನಣ್ಣ ಅವರ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸುವ ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಕಳೆದ 20 ವರ್ಷಗಳಲ್ಲಿ ಆಗದ ಕೆಲಸಗಳನ್ನು ಕೇವಲ 3 ವರ್ಷಗಳಲ್ಲಿ ಶಾಸಕರು ಮಾಡಿದ್ದಾರೆ. ಸ್ಥಗಿತಗೊಂಡಿದ್ದ ಭಾಗಮಂಡಲ ಮೇಲು ಸೇತುವೆ ಈಗ ಸಂಚಾರಕ್ಕೆ ಮುಕ್ತವಾಗಿದೆ. ಭಾಗಮಂಡಲ ಸುತ್ತಮುತ್ತ ಕೋಟ್ಯಂತರ ರೂ. ವೆಚ್ಚದಲ್ಲಿ ರಸ್ತೆ, ತಡೆಗೋಡೆ, ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಬಿಜೆಪಿ ಪ್ರತಿಭಟಿಸಿದ ರಸ್ತೆಗೂ ಈಗಾಗಲೇ ಟೆಂಡರ್ ಆಗಿ ಕಾಮಗಾರಿ ದುರಸ್ತಿ ಹಂತದಲ್ಲಿದೆ. ಭಾಗಮಂಡಲ-ನಾಪೋಕ್ಲು ರಸ್ತೆಗೆ 3 ಕೋಟಿ ಅನುದಾನ ಬಿಡುಗಡೆಯಾಗಿ ಅಕ್ಟೋಬರ್‌ನಿಂದ ಕಾಮಗಾರಿ ಶುರುವಾಗಲಿದೆ ಎಂದು ಸ್ಪಷ್ಟಪಡಿಸಿದರು.
ತಲಕಾವೇರಿ-ಭಾಗಮಂಡಲದಲ್ಲಿ ಅರ್ಚಕರ ವಸತಿ, ವ್ಯಾಪಾರ ಮಳಿಗೆ ಸೇರಿ ಹಲವು ಯೋಜನೆಗಳು ಪ್ರಗತಿಯಲ್ಲಿವೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಹುರುಳಿಲ್ಲದ ಆರೋಪ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಸುನಿಲ್ ಪತ್ರಾವೋ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಗೌರೀಶ್ ರೈ, ಹಂಸ ಕೋಡಿ ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
