ಮಡಿಕೇರಿ ನಗರದಲ್ಲಿ ಬಿಜೆಪಿಯಿಂದ ಏಕತಾ ಯಾತ್ರೆ

ಮಡಿಕೇರಿ ನಗರದಲ್ಲಿ ಬಿಜೆಪಿಯಿಂದ ಏಕತಾ ಯಾತ್ರೆ

ಮಡಿಕೇರಿ: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ನಗರದಲ್ಲಿ ಶುಕ್ರವಾರ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಪ್ರಯುಕ್ತ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಏಕತಾ ಯಾತ್ರೆ ನಡೆಸಿ, ರಾಷ್ಟ್ರದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಗುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಮತ್ತು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ರಾಬಿನ್ ದೇವಯ್ಯ, ರವಿ ಕುಶಾಲಪ್ಪ, ಬಿ.ಬಿ.ಭಾರತೀಶ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ವಿವಿಧ ಘಟಕಗಳ ಪ್ರಮುಖರು ಪಾಲ್ಗೊಂಡಿದ್ದರು.