ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ:ಕೊಡಗು ಬಿಜೆಪಿ
admincoorgdaily

ಮಡಿಕೇರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ರೂ.೧೮೭ ಕೋಟಿ ಹಗರಣದ ಆರೋಪ ಹೊತ್ತಿದ್ದರೂ ಸಚಿವ ಬಿ.ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿರುವುದು ಸರಿಯಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಪ ಪಟ್ಟಿಯಲ್ಲಿರುವವರಿಗೆ ಸಚಿವ ಸ್ಥಾನ ನೀಡಿರುವುದು ಪರಿಶಿಷ್ಟ ವರ್ಗಕ್ಕೆ ಮಾಡಿದ ಅನ್ಯಾಯ. ಅವರನ್ನು ಕ್ಯಾಬಿನೆಟ್‌ಗೆ ತರಲು ಸಿಎಂಗೆ ಇದ್ದ ಒತ್ತಡವೇನು? ಹೈಕಮಾಂಡ್ ಸೂಚನೆಯಿತ್ತೇ ಎಂದು ಪ್ರಶ್ನಿಸಿದ ಅವರು, ಈ ಪ್ರಕರಣದಿಂದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ತನಿಖೆ ಪೂರ್ಣವಾಗಿಲ್ಲದ ಕಾರಣ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು, ರಾಜೀನಾಮೆ ಬರುವವರೆಗೆ ಸದನದ ಒಳ-ಹೊರಗೆ ಹೋರಾಟ ಮುಂದುವರಿಯಲಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಯೂ ನಡೆಯಲಿದೆ ಎಂದರು.
ಕಸ್ತೂರಿ ರಂಗನ್ ವಿಷಯದಲ್ಲಿ ಸಂಸದರೊಂದಿಗೆ ಚರ್ಚಿಸಲಾಗಿದೆ. ರೈತರಿಗೆ ತೊಂದರೆಯಾಗದಂತೆ ಕೇಂದ್ರ-ರಾಜ್ಯದೊಂದಿಗೆ ಮಾತುಕತೆ ನಡೆಯಲಿದೆ. ಇದು ಜಿಲ್ಲೆಯ ಸಮಸ್ಯೆ. ರಾಜಕೀಯ ಬೇಡ, ಎಲ್ಲರೂ ಆಕ್ಷೇಪ ಸಲ್ಲಿಸಲಿ ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್‌ಕುಮಾರ್, ಪ್ರಮುಖರಾದ ಸಜಿಲ್ ಕೃಷ್ಣ ಇದ್ದರು.