ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪುರಸಭೆ, ಹಾಗೂ ಕುಶಾಲನಗರ ಪುರಸಭೆ, ಚುನಾಯಿತ ಸದಸ್ಯರ ಅವಧಿ ಮುಕ್ತಾಯ ಹಿನ್ನೆಲೆ: ಆಡಳಿತ ಅಧಿಕಾರಿಗಳ ನೇಮಿಸಿ ಸರಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯದ 42 ನಗರ ಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯಿತಿಯ ಚುನಾಯಿತ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಂಡಿದ್ದು, ಈ ಹಿನ್ನಲೆಯಲ್ಲಿ ಆಡಳಿತ ಅಧಿಕಾರಿಗಳ ನೇಮಕಾತಿಗೊಳಿಸಿ ಕರ್ನಾಟಕ ರಾಜ್ಯ ನಗರ ಅಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳಾದ ಟಿ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಕೊಡಗಿನ ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪುರಸಭೆ ಹಾಗೂ ಕುಶಾಲನಗರ ಪುರಸಭೆಗೆ ಆಡಳಿತ ಅಧಿಕಾರಿಯಾಗಿ ಜಿಲ್ಲೆಯ ಉಪ ವಿಭಾಗಾಧಿಕಾರಿಗಳನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ*. ಚುನಾಯಿತ ಕೌನ್ಸಿಲ್ ಅವಧಿ ಮುಕ್ತಾಯಗೊಂಡಿದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964 ಕಾಲಂ 389 ರಲ್ಲಿ ಪದದತ್ತವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯಗೊಂಡ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಸಂಸ್ಥೆಗಳಲ್ಲಿ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಾರೆ.