80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬ್ಯಾಡ್ಜ್ ವಿತರಣೆ

Aug 13, 2026 - 19:51
 0  38
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬ್ಯಾಡ್ಜ್ ವಿತರಣೆ

ಮಡಿಕೇರಿ:80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಬ್ಯಾಡ್ಜ್ ವಿತರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಸಾರುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾಜ ಕಲ್ಯಾಣ ಇಲಾಖೆಯ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಈ ಕಾರ್ಯಕ್ರಮ ನಡೆಯಿತು.

ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಎಸ್.ಸಿ. ಮೋರ್ಚಾದ ವತಿಯಿಂದ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ಅಧ್ಯಕ್ಷ ಪಿ.ಎಂ. ರವಿ ಮೊಗೇರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ ರವಿ ಮೊಗೇರ ಅವರು, "ವಿದ್ಯಾರ್ಥಿಗಳು ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ರಾಷ್ಟ್ರಕ್ಕೆ ದ್ರೋಹ ಬಗೆಯುವ ಅಥವಾ ಅಪಮಾನ ಮಾಡುವವರನ್ನು ಖಂಡಿಸುವ ಮತ್ತು ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಅಂತಹ ವಿಚಾರಗಳಲ್ಲಿ ವಿದ್ಯಾರ್ಥಿಗಳು ಮುಂಚೂಣಿಯಲ್ಲಿರಬೇಕು" ಎಂದು ಕರೆ ನೀಡಿದರು.

 ಜೊತೆಗೆ, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸಬೇಕು ಎಂದು ಅವರು ಕಿವಿಮಾತು ಹೇಳಿದರು. 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಲ್ಲರೂ ಪಾಲ್ಗೊಂಡು ರಾಷ್ಟ್ರಕ್ಕೆ ಗೌರವ ಸೂಚಿಸಬೇಕು. ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡುವಂತೆ ಮಾಡಿ, ರಾಷ್ಟ್ರದ ಬಗ್ಗೆ ನಮ್ಮ ಗೌರವವನ್ನು ಪ್ರದರ್ಶಿಸಬೇಕು ಎಂದು ಅವರು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಎಲ್ಲ ವಿದ್ಯಾರ್ಥಿಗಳಿಗೂ ಬ್ಯಾಡ್ಜ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಬಿಜೆಪಿ ಎಸ್.ಸಿ. ಮೋರ್ಚಾದ ನಗರ ಮಂಡಲ ಅಧ್ಯಕ್ಷ ಮುಕುಂದ, ಮಾಧ್ಯಮ ಪ್ರಮುಖರಾದ ಅಪ್ಪು ಮಹೇಶ್, ಹಾಗೂ ವಸತಿ ನಿಲಯದ ಸಿಬ್ಬಂದಿಗಳಾದ ಮಂಜುನಾಥ್, ರೀಟಾ, ವಿನೋದ್ ಮತ್ತು ಹರ್ಷಿತ್ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0