ಫೆ.26, ಮತ್ತು 27ರಂದು ವನಚಾಮುಂಡೇಶ್ವರಿಯ ದೇವಾಲಯದಲ್ಲಿ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ

Feb 24, 2026 - 13:36
 0  195
ಫೆ.26, ಮತ್ತು 27ರಂದು  ವನಚಾಮುಂಡೇಶ್ವರಿಯ ದೇವಾಲಯದಲ್ಲಿ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ

ಮಡಿಕೇರಿ: ೪೨೬ ವರ್ಷ ಇತಿಹಾಸ ಹೊಂದಿರುವ ವನಚಾಮುಂಡೇಶ್ವರಿಯ ದೇವಾಲಯದಲ್ಲಿ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಫೆ.೨೬, ೨೭ ರಂದು ದೇವಾಲಯದ ಆವರಣದಲ್ಲಿ ನಡೆಯಲಿದೆ ವನಚಾಮುಂಡೇಶ್ವರಿಯ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಟಿ.ಕೆ.ಸುದೀರ್ ತಿಳಿಸಿದ್ದಾರೆ.

ಮಡಿಕೇರಿಯ ಜ್ಯೋತಿನಗರದಲ್ಲಿರುವ ದೇವಾಲದ ಜೀರ್ಣೋದ್ಧಾರ ಕಾಮಗಾರಿ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಹಿನ್ನೆಲೆ ಪುನರ್ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಳಸ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಂತ್ರಿಗಳಾದ ಬ್ರಹ್ಮಶ್ರಿ ಶ್ರೀಕಾಂತ್ ಭಟ್ಟತಿರಿ ಚಾಲೋಡ್ ಅವರ ನೇತೃತ್ವದಲ್ಲಿ ಫೆ.೨೬ ರಂದು ವಿವಿಧ ಪೂಜಾ ಕೈಂಕರ್ಯ ನಡೆಯಲಿದೆ.

 ಕಾರ್ಯಕ್ರಮ ಪ್ರಯುಕ್ತ ನಗರದ ಮುಖ್ಯ ಬೀದಿಗಳಲ್ಲಿ ಭವ್ಯ ಕಳಸ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಫೆ.೨೭ ರಂದು ಬೆಳಗ್ಗೆ ೬ ಗಂಟೆಗೆ ಮಹಾಗಣಪತಿ ಹೋಮದೊಂದಿಗೆ ವಿವಿಧ ಪೂಜಾ ಪುನಸ್ಕಾರ ನಡೆಯಲಿದೆ.

 ಬೆಳಗ್ಗೆ ೧೧.೧೨ ರಿಂದ ೧೧.೩೪ ರವರೆಗಿನ ಕುಂಭ ಲಗ್ನ ಶುಭಮುಹೂರ್ತದಲ್ಲಿ ಬಿಂಭಪ್ರತಿಷ್ಠೆ, ಕಲಾಭಿಷೇಕ ಪೂಜೆ, ಮಹಾಪೂಜೆ ನಡೆಯಲಿದೆ. ಮಾ.೩ ರಂದು ದೇವಾಲಯದ ವಾರ್ಷಿಕ ಪೂಜೆ ನಡೆಯಲಿದೆ ಎಂದ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವನಚಾಮುಂಡೇಶ್ವರಿ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಬಾಬು, ಉಪಾಧ್ಯಕ್ಷ ಗುರುಪ್ರಸಾದ್, ಕಾರ್ಯದರ್ಶಿ ಸುನಿಲ್, ಧರ್ಮದರ್ಶಿಗಳಾದ ನಂಜಪ್ಪ, ನಾಗೇಶ್ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0