ಫೆ.05ರಂದು ಬಹುರೂಪಿ ಪುಸ್ತಕ ಬಿಡುಗಡೆ ಸಮಾರಂಭ

ಫೆ.05ರಂದು ಬಹುರೂಪಿ ಪುಸ್ತಕ ಬಿಡುಗಡೆ ಸಮಾರಂಭ
ಅಲ್ಲಾರಂಡ ವಿಠಲ ನಂಜಪ್ಪ

ಮಡಿಕೇರಿ: ಅಲ್ಲಾರಂಡ ರಂಗಚಾವಡಿ, ಸಿರಿಗನ್ನಡ ವೇದಿಕೆ ಹಾಗೂ ಚಕೋರ ಕೊಡಗು ಕನಾರ್ಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬಹುರೂಪಿ ಪುಸ್ತಕ ಬಿಡುಗಡೆ ಸಮಾರಂಭ ಫೆ.೫ ರಂದು ನಗರದ ಗಾಂಧಿಭವನದಲ್ಲಿ ನಡೆಯಲಿದೆ ಎಂದು ರಂಗಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು.

ಅಂದು ಬೆಳಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರು ಮತ್ತು ಕ್ರೀಡಾ ಬರಹಗಾರರಾದ ಮನೆಯಪಂಡ.ಎ.ಪೊನ್ನಪ್ಪ ವಹಿಸಲಿದ್ದಾರೆ. ಸಾಹಿತಿ ಮತ್ತು ವಿಚಾರವಾದಿಗಳಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಜೆ.ಸಿ.ಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್.ನರೇನ್ ಕಾರ್ಯಪ್ಪ, ಸಾಹಿತಿಗಳಾದ ಕೆ.ಪಿ.ಬಾಲಸುಬ್ರಹ್ಮಣ್ಯ ಕಂಜರ್ಪಣೆ, ಪ್ರಮುಖರಾದ ಉಳ್ಳಿಯಡ ಎಂ.ಪೂವಯ್ಯ, ವಕೀಲ ಬಿ.ಆರ್.ರಂಗಸ್ವಾಮಿ, ಮಂಗಳೂರು ವಿವಿ ಸಂಸ್ಕೃತಿ ಚಿಂತಕ ಪ್ರೊ.ಟಿ.ರಂಗಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

 ಸುದ್ದಿಗೋಷ್ಠಿಯಲ್ಲಿ ಗಿರಿಜನ ಸಹಕಾರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ಮಿಟ್ಟು ರಂಜಿತ್, ಮಾಜಿ ಸೈನಿಕ ಬಿ.ಗಣೇಶ್ ಹಾಜರಿದ್ದರು.