Kodagu

ಬಲ್ಲಮಾವಟ್ಟಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಥಾರ್ ಜೀಪ್

admincoorgdaily

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಚಾಲಕನ ನಿಯಂತ್ರಣ ತಪ್ಪಿದ ಥಾರ್ ಜೀಪೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ನಾಪೋಕ್ಲು ಭಾಗಮಂಡಲ ಮುಖ್ಯರಸ್ತೆಯ ಬಲ್ಲಮಾವಟಿ ಗ್ರಾಮದಲ್ಲಿ ನಡೆದಿದೆ. ನಾಪೋಕ್ಲು ಕಡೆಯಿಂದ ಅಯ್ಯಂಗೇರಿ ಕಡೆಗೆ ತೆರಳುತ್ತಿದ್ದ ಮಹೇಂದ್ರ ತಾರ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಲ್ಲಮಾವಟಿ ಗ್ರಾಮದ ಆಯುರ್ವೇದಿಕ್ ಆಸ್ಪತ್ರೆಯ ಮುಂಭಾಗದ ಮುಖ್ಯರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿದೆ. ಅಪಘಾತದಿಂದ ತಾರ್ ಜೀಪಿಗೆ ಹಾಗೂ ವಿದ್ಯುತ್ ಕಂಬಕ್ಕೂ ಹಾನಿಯಾಗಿದ್ದು ಚಾಲಕ ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.