2 ಲೀಟರಿಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

Jun 11, 2026 - 17:40
Jun 11, 2026 - 17:48
 0  616
2 ಲೀಟರಿಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

ಮಡಿಕೇರಿ; ಜೂ.11:-ಸಾರ್ವಜನಿಕರ ಹಾಗೂ ಪರಿಸರದ ಹಿತದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಈ ಪ್ರಕಟಣೆ ದಿನಾಂಕದಿಂದ ಮಾರಾಟ, ಖರೀದಿ ಹಾಗೂ ಶೇಖರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 

    ಈಗಾಗಲೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ (ಕವರ್, ಇಯರ್ ಬಡ್ಸ್, ಸ್ಟ್ರಾ ಪೈಪ್, ಕ್ಯಾಂಡಿ ಮತ್ತು ಐಸ್ ಕ್ರೀಮ್ ಕಡ್ಡಿಗಳು, ಅಲಂಕಾರ ವಸ್ತುಗಳು, ಪ್ಯಾಕಿಂಗ್ ಸಾಮಾಗ್ರಿಗಳು, ಆಮಂತ್ರಣ ಪತ್ರಿಕೆಗಳು ಹಾಗೂ ಇತ್ಯಾದಿ) ಸಹ ನಿಷೇಧಿಸಿರುವುದರಿಂದ ಸಾರ್ವಜನಿಕರು, ಉದ್ದಿಮೆದಾರರು ಹಾಗೂ ಪ್ರವಾಸಿಗರು ಬಳಸದಂತೆ ಕೋರಲಾಗಿದೆ. 

        ಆದರಿಂದ ಉದ್ದಿಮೆದಾರರು ತಕ್ಷಣದಿಂದ ಜಾರಿಗೆ ಬರುವಂತೆ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಮಾರಾಟ ಹಾಗೂ ಸಂಗ್ರಹಿಸದಂತೆ ಹಾಗೆಯೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡದಂತೆ, ಸಂಗ್ರಹಿಸುವುದನ್ನು ಕೂಡಲೇ ಸ್ಥಗಿತಗೊಳಿಸುವುದು ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರು ತಿಳಿಸಿದ್ದಾರೆ.

What's Your Reaction?

Like Like 1
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 2