ಕೊಡಗು ಜಿಲ್ಲೆಯಲ್ಲಿ ಆಗಸ್ಟ್ 31 ರವರೆಗೆ ಮರ ದಿಮ್ಮಿಗಳ ಸಾಗಾಣಿಕೆ ನಿಷೇಧ
admincoorgdaily

ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಹಾಗೂ ಗಾಳಿಯ ಹಿನ್ನೆಲೆಯಲ್ಲಿ ಮರಗಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ಆಗಸ್ಟ್ 31 ರ ವರೆಗೆ ವಿಸ್ತರಿಸಲಾಗಿದೆ.
ಜಿಲ್ಲೆಯಲ್ಲಿ ಆಗಸ್ಟ್ 17 ರ ವರೆಗೆ ಮರಗಳು ಹಾಗೂ ಮರದ ದಿಮ್ಮಿಗಳ ಸಾಗಾಣಿಕೆ ಮತ್ತು ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಭಾರಿ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಾಜ್ಞೆಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಉಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.