ಆಗಸ್ಟ್ 07ವರೆಗೆ ಕೊಡಗಿನಲ್ಲಿ ಮರ ದಿಮ್ಮಿಗಳ ಸಾಗಾಟ ನಿಷೇಧ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂದುವರಿದಿರುವ ಭಾರಿ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರದ ಮೇಲಿನ ನಿಷೇಧವನ್ನು ಜಿಲ್ಲಾಡಳಿತವು ಆಗಸ್ಟ್ 7, 2026ರವರೆಗೆ ವಿಸ್ತರಿಸಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಹೊರಡಿಸಿರುವ ಆದೇಶದ ಪ್ರಕಾರ, ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ರಸ್ತೆಗಳ ಅಂಚುಗಳು ಸಡಿಲಗೊಂಡು ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರ ಸುರಕ್ಷತೆ, ರಸ್ತೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಈ ಹಿಂದೆ ಜೂನ್ 5ರಂದು ಹೊರಡಿಸಿದ್ದ ಆದೇಶದಂತೆ ಜುಲೈ 9ರವರೆಗೆ ಜಾರಿಯಲ್ಲಿದ್ದ ನಿಷೇಧವನ್ನು ಇದೀಗ ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರ ನಿಷೇಧ ಮುಂದುವರಿಯಲಿದ್ದು, ಉಳಿದ ಎಲ್ಲ ಷರತ್ತುಗಳು ಯಥಾಸ್ಥಿತಿಯಲ್ಲಿ ಜಾರಿಯಲ್ಲಿರುತ್ತವೆ. ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ಹಾಗೂ ಸಾರ್ವಜನಿಕರಿಗೆ ಸೂಚಿಸಲಾಗಿದೆ
What's Your Reaction?
Like
0
Dislike
0
Love
1
Funny
0
Angry
0
Sad
0
Wow
0

