ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿ ಚುನಾವಣೆ: ಮತ ಚಲಾಯಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ಕೊಡವ ಸಮಾಜದ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಗೆ ಇಂದು ಚುನಾವಣೆ ನಡೆಯಿತು. ಬೆಂಗಳೂರಿನ ಕೊಡವ ಸಮಾಜ ಆವರಣದಲ್ಲಿ ಇಂದು ನಡೆದ ಚುನಾವಣೆಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ತಮ್ಮ ಮತವನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ಹಲವು ಸಮಯವನ್ನು ಸ್ಥಳದಲ್ಲಿ ಉಪಸ್ಥಿತರಿದ್ದ ಸಮಾಜದ ಬಂಧುಗಳೊಂದಿಗೆ ಕಳೆದ ಶಾಸಕರು, ಅಭ್ಯರ್ಥಿಗಳಿಗೆ ಶುಭ ಕೋರಿದರು.