ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಗೆಲುವು ಸಾಧಿಸಿದ ತಂಡಗಳು
ಮಡಿಕೇರಿ ಏ.20 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.20 ರಂದು ಗೆಲುವು ಸಾಧಿಸಿದ ತಂಡಗಳು.
ಮೈದಾನ 1(ಲಾಲು ಮುದ್ದಯ್ಯ ಮೈದಾನ);
ಮಾಳೇಟಿರ (ಕೆದಮುಳ್ಳೂರು) ಮತ್ತು ಕೊಡಂದೇರ ತಂಡಗಳ ನಡುವಿನ ಪಂದ್ಯದಲ್ಲಿ ಮಾಳೇಟಿರ ತಂಡಕ್ಕೆ 148 ರನ್ ಗಳ ಭರ್ಜರಿ ಗೆಲುವು ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮಾಳೇಟಿರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ ದಾಖಲೆಯ 190 ರನ್ ಗಳನ್ನು ಸೇರಿಸಿತು. ಕೊಡಂದೇರ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನಷ್ಟೇ ಗಳಿಸಿ ಸೋಲು ಅನುಭವಿಸಿತು.
ತಂಬುಕುತ್ತೀರ ಮತ್ತು ಚೇಂದoಡ ನಡುವಿನ ಪಂದ್ಯದಲ್ಲಿ ತಂಬುಕುತ್ತೀರ ತಂಡಕ್ಕೆ 49 ರನ್ ಗಳ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತಂಬುಕುತ್ತೀರ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 111 ರನ್ ಗಳನ್ನು ಗಳಿಸಿತು. ಚೇಂದoಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.
ಬೊಜ್ಜಂಗಡ ಮತ್ತು ಚಿರಿಯಪಂಡ ನಡುವಿನ ಪಂದ್ಯದಲ್ಲಿ ಚಿರಿಯಪಂಡ ತಂಡಕ್ಕೆ 8 ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬೊಜ್ಜಂಗಡ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಗಳಿಸಿತು. ಚಿರಿಯಪಂಡ 5.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 84 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು.
ಕನ್ನಂಡ ಮತ್ತು ಅಲ್ಲಂಗಡ ನಡುವಿನ ಪಂದ್ಯದಲ್ಲಿ ಕನ್ನಂಡ 10 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕನ್ನಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಸೇರಿಸಿತು. ಅಲ್ಲಂಗಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 72 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಮೈದಾನ 2; (ಎಸ್‌ಎಂಎಸ್, ಅರಮೇರಿ)
ಮುಕ್ಕಾಟಿರ (ಕುಂಬಳದಾಳು) ಮತ್ತು ಚೀಕಂಡ ನಡುವಿನ ಪಂದ್ಯದಲ್ಲಿ ) ಮುಕ್ಕಾಟಿರ ತಂಡಕ್ಕೆ 10 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೀಕಂಡ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 32 ರನ್ ಗಳನ್ನು ಗಳಿಸಿತು. ಮುಕ್ಕಾಟಿರ 3.1 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 35 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು.
ಬಲ್ಲಚಂಡ ಮತ್ತು ಸಿದ್ದಂಡ ನಡುವಿನ ಪಂದ್ಯದಲ್ಲಿ ಸಿದ್ದಂಡ ತಂಡ 37 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿದ್ದಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 80 ರನ್ ಗಳನ್ನು ಸೇರಿಸಿತು. ಬಲ್ಲಚಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಗಳಿಸಿ ಸೋಲು ಕಂಡಿತು.
ಬೊಳ್ಳೇರ ಮತ್ತು ಅಣ್ಣಳಮಾಡ (ಪೂಕೊಳ) ನಡುವಿನ ಹಣಾಹಣಿಯಲ್ಲಿ ಬೊಳ್ಳೇರ 5 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಣ್ಣಳಮಾಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಗಳಿಸಿತು. ಬೊಳ್ಳೇರ 5.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು.
ಮಾಳೇಟಿರ (ಕೆದಮುಳ್ಳೂರು) ಮತ್ತು ಮಲಚ್ಚೀರ ನಡುವಿನ ಪಂದ್ಯದಲ್ಲಿ ಮಾಳೇಟಿರ 25 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಾಳೇಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಸೇರಿಸಿತು. ಮಲಚ್ಚೀರ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಐಚೋಡಿಯoಡ ಮತ್ತು ಚೆಕ್ಕೇರ ನಡುವಿನ ಪಂದ್ಯದಲ್ಲಿ ಚೆಕ್ಕೇರ 23 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆಕ್ಕೇರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 91 ರನ್ ಗಳನ್ನು ಗಳಿಸಿತು. ಐಚೋಡಿಯಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನಷ್ಟೇ ಸೇರಿಸಿ ಸೋಲು ಕಂಡಿತು.