ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
ಮಡಿಕೇರಿ ಏ.18 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.18 ರಂದು ಗೆಲುವು ಸಾಧಿಸಿದ ತಂಡಗಳು.
ಮೈದಾನ 1;
ತೀತಮಾಡ(ಕುಂದ) ಮತ್ತು ಕಾಣತಂಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಣತಂಡ 30 ರನ್ ಗಳ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಣತಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 94 ರನ್ ಗಳನ್ನು ಸೇರಿಸಿತು. ತೀತಮಾಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಆದೇoಗಡ ಮತ್ತು ಗೀಜಿಗಂಡ ನಡುವಿನ ಪಂದ್ಯದಲ್ಲಿ ಗೀಜಿಗಂಡ 15 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗೀಜಿಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಸೇರಿಸಿತು. ಆದೇಂಗಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಗಳಿಸಿ ಸೋಲು ಕಂಡಿತು.
ಪರುವAಡ ಮತ್ತು ಕನ್ನಿಗಂಡ ನಡುವಿನ ಪಂದ್ಯದಲ್ಲಿ ಪರುವಂಡ 48 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪರುವಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭರ್ಜರಿ 103 ರನ್ ಗಳನ್ನು ಸೇರಿಸಿತು. ಕನ್ನಿಗಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನಷ್ಟೇ ಗಳಿಸಿ ಸೋಲು ಅನುಭವಿಸಿತು.
ಉಡುವೆರ ಮತ್ತು ಮುಕ್ಕಾಟಿರ (ಬೇತ್ರಿ) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 9 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಉಡುವೆರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 53 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ಕೇವಲ 2.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು.
ಮೂಕಳೇರ ಮತ್ತು ಬಲ್ಯಮೀದೇರಿರ ನಡುವಿನ ಪಂದ್ಯದಲ್ಲಿ ಮೂಕಳೇರ 8 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಲ್ಯಮೀದೇರಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಗಳಿಸಿತು. ಮೂಕಳೇರ 3.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಸೇರಿಸಿ ಜಯ ಕಂಡಿತು.
ಮಂಡೇಪಂಡ ಮತ್ತು ಕಾಡ್ಯಮಾಡ ನಡುವಿನ ಪಂದ್ಯದಲ್ಲಿ ಮಂಡೇಪಂಡ 7 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಡ್ಯಮಾಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಸೇರಿಸಿತು. ಮಂಡೇಪoಡ 5.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಗಳಿಸಿ ಗೆಲುವು ಕಂಡಿತು.
ನೆರವಂಡ ಮತ್ತು ಪೊನ್ನಿಮಾಡ ನಡುವಿನ ಹಣಾಹಣಿಯಲ್ಲಿ ನೆರವಂಡ 51 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೆರವಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಸೇರಿಸಿತು. ಪೊನ್ನಿಮಾಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನಷ್ಟೇ ಗಳಿಸಿ ಸೋಲು ಕಂಡಿತು.
ಮೈದಾನ 2;
ಕೋಳೇರ ಮತ್ತು ಕುಂಞoಡ ತಂಡಗಳ ನಡುವಿನ ಪಂದ್ಯದಲ್ಲಿ ಕೋಳೇರ 9 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಂಞಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 37 ರನ್ ಗಳನ್ನು ಸೇರಿಸಿತು. ಕೋಳೇರ 2.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿ ಗೆಲುವು ಕಂಡಿತು.
ಬಾರಿಯಂಡ ಮತ್ತು ಬೊಟ್ಟಂಗಡ ನಡುವಿನ ಪಂದ್ಯದಲ್ಲಿ ಬೊಟ್ಟಂಗಡ 85 ರನ್ ಗಳ ಭರ್ಜರಿ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬೊಟ್ಟಂಗಡ 6 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 109 ರನ್ ಗಳನ್ನು ಸೇರಿಸಿತು. ಬಾರಿಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಕೇವಲ 29 ರನ್ ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.
ಚೇರಂಡ ಮತ್ತು ಚಿಮ್ಮಣಮಾಡ ನಡುವಿನ ಪಂದ್ಯದಲ್ಲಿ ಚೇರಂಡ 8 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚಿಮ್ಮಣಮಾಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಸೇರಿಸಿತು. ಚೇರಂಡ 5.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಗಳಿಸಿ ಗೆಲುವು ಕಂಡಿತು.
ಮoಡೆಯoಡ (ಮಾದಾಪುರ) ಮತ್ತು ಮಂದಂಗಡ ನಡುವಿನ ಪಂದ್ಯದಲ್ಲಿ ಮಂಡೆಯoಡ 6 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂದoಗಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿತು. ಮಂಡೆಯoಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 62 ಗಳನ್ನು ಸೇರಿಸಿ ಗೆಲುವು ಸಾಧಿಸಿತು.
ಮಂಡುವoಡ ಮತ್ತು ಅಚ್ಚಪ್ಪಂಡ ನಡುವಿನ ಪಂದ್ಯದಲ್ಲಿ ಮಂಡುವoಡ 8 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡುವoಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಸೇರಿಸಿತು. ಅಚ್ಚಪ್ಪಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಗಳಿಸಿ ಸೋಲು ಕಂಡಿತು.
ಮುಕ್ಕಾಟಿರ (ಮೂವತ್ತೊಕ್ಲು) ಮತ್ತು ಕಳಕಂಡ ನಡುವಿನ ಪಂದ್ಯದಲ್ಲಿ ಕಳಕಂಡ 8 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಕ್ಕಾಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 50ರನ್ ಗಳನ್ನು ಸೇರಿಸಿತು. ಕಳಕಂಡ 2.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಗಳಿಸಿ ಗೆಲುವಿನ ನಗೆ ಬೀರಿತು.
ಬೊಳ್ಳೆಪಂಡ ಮತ್ತು ಐಚಂಡ (ದೇವಣಗೇರಿ) ನಡುವಿನ ಹಣಾಹಣಿಯಲ್ಲಿ ಬೊಳ್ಳೆಪಂಡ ತಂಡ 7 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐಚಂಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 59 ರನ್ ಗಳನ್ನು ಗಳಿಸಿತು. ಬೊಳ್ಳೆಪಂಡ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಸೇರಿಸಿ ವಿಜಯ ಸಾಧಿಸಿತು.