ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು
ಮಡಿಕೇರಿ ಏ.24 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.24 ರಂದು ಗೆಲುವು ಸಾಧಿಸಿದ ತಂಡಗಳು.
ಮೈದಾನ 1 (ಲಾಲು ಮುದ್ದಯ್ಯ ಮೈದಾನ);
ಕೋಳೆರ ಮತ್ತು ಗೀಜಿಗಂಡ ತಂಡಗಳ ನಡುವಿನ ಪಂದ್ಯದಲ್ಲಿ ಕೋಳೆರ 7 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗೀಜಿಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 46 ರನ್ ಗಳನ್ನು ಗಳಿಸಿತು. ಕೋಳೆರ 5.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಜಯ ಕಂಡಿತು.
ಪಾರುವಂಡ ಮತ್ತು ಮಂದೇಯoಡ (ಮಾದಾಪುರ) ನಡುವಿನ ಪಂದ್ಯದಲ್ಲಿ ಪಾರುವಂಡ ತಂಡಕ್ಕೆ 8 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂದೇಯoಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಸೇರಿಸಿತು. ಪಾರುವಂಡ 2.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿ ಗೆಲುವಿನ ನಗು ಬೀರಿತು.
ಮೂಕಳೆರ ಮತ್ತು ಮುಕ್ಕಾಟಿರ (ಬೆಳ್ಳೂರು ಹರಿಹರ) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 7 ವಿಕೆಟ್ ಗಳಿಂದ ಜಯ ಗಳಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೂಕಳೆರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ತಂಡ 5.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಸೇರಿಸಿ ವಿಜಯ ಸಾಧಿಸಿತು.
ಕೊಟ್ಟಂಗಡ ಮತ್ತು ಮೂಕೊಂಡ ನಡುವಿನ ಪಂದ್ಯದಲ್ಲಿ ಕೊಟ್ಟಂಗಡ ತಂಡಕ್ಕೆ 8 ವಿಕೆಟ್ ಗಳ ಜಯ ದೊರೆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೂಕೊಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 59 ರನ್ ಗಳನ್ನು ಸೇರಿಸಿತು. ಕೊಟ್ಟಂಗಡ 4.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.
ಮೈದಾನ 2 (ಅರಮೇರಿ ಎಸ್‌ಎಂಎಸ್);
ಮುಕ್ಕಾಟಿರ (ಕುಂಬಳದಾಳು) ಮತ್ತು ನೆರವಂಡ ನಡುವಿನ ಪಂದ್ಯದಲ್ಲಿ ನೆರವಂಡ ತಂಡಕ್ಕೆ 24 ರನ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೆರವಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಗಳಿಸಿತು. ಮುಕ್ಕಾಟಿರ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 25 ರನ್ ಗಳನ್ನಷ್ಟೇ ಸೇರಿಸಿ ಸೋಲು ಕಂಡಿತು.
ತoಬುಕುತ್ತಿರ ಮತ್ತು ಮಾಳೇಟಿರ (ಕೆದಮುಳ್ಳೂರು) ನಡುವಿನ ಹಣಾಹಣಿಯಲ್ಲಿ ಮಾಳೇಟಿರ 9 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ತಂಬುಕುತ್ತಿರ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನು ಸೇರಿಸಿತು. ಮಾಳೇಟಿರ ಕೇವಲ 2.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಸೇರಿಸಿ ಜಯ ದಾಖಲಿಸಿತು.
ಕರಿನೆರವಂಡ ಮತ್ತು ನಂದಿನೆರವoಡ ನಡುವಿನ ಪಂದ್ಯದಲ್ಲಿ ಕರಿನೆರವಂಡ 7 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರಿನೆರವಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 79 ರನ್ ಗಳನ್ನು ಸೇರಿಸಿತು. ನಂದಿನೆರವoಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 72 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಅಳಮೇಂಗಡ ಮತ್ತು ದಾಸಂಡ ನಡುವಿನ ಪಂದ್ಯದಲ್ಲಿ ಅಳಮೇಂಗಡ 9 ವಿಕೆಟ್ ಗಳಿಂದ ಗೆಲುವು ಕಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಾಸಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು. ಅಳಮೇಂಗಡ 2.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು.