ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ಗೆಲುವು ಸಾಧಿಸಿದ ತಂಡಗಳು
ಮಡಿಕೇರಿ ಏ.25 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.25 ರಂದು ಗೆಲುವು ಸಾಧಿಸಿದ ತಂಡಗಳು.
ಮೈದಾನ 1(ಲಾಲು ಮುದ್ದಯ್ಯ ಮೈದಾನ)
ಮಂಡುವoಡ ಮತ್ತು ಕಳಕಂಡ ತಂಡಗಳ ನಡುವಿನ ಪಂದ್ಯದಲ್ಲಿ ಮಂಡುವoಡ 16 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡುವoಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಸೇರಿಸಿತು. ಕಳಕಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಮoಡೇಪoಡ ಮತ್ತು ಮಲ್ಲಜ್ಜಿರ ನಡುವಿನ ಪಂದ್ಯದಲ್ಲಿ ಮಲ್ಲಜ್ಜಿರ 8 ವಿಕೆಟ್ ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡೇಪAಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿತು. ಮಲ್ಲಜ್ಜಿರ 4.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಸೇರಿಸಿ ಪಂದ್ಯವನ್ನು ಗೆದ್ದುಕೊಂಡಿತು.
ಮಾಚೆಟ್ಟಿರ (ಬಾಳುಗೋಡು) ಮತ್ತು ಬೊಟ್ಟಂಗಡ ನಡುವಿನ ಪಂದ್ಯದಲ್ಲಿ ಬೊಟ್ಟಂಗಡ 62 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೊಟ್ಟಂಗಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 124 ರನ್ ಗಳನ್ನು ಸೇರಿಸಿತು. ಮಾಚೆಟ್ಟಿರ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನಷ್ಟೇ ಗಳಿಸಿ ಸೋಲು ಕಂಡಿತು.
ಚೆಕ್ಕೇರ ಮತ್ತು ಓಡಿಯಂಡ ನಡುವಿನ ಪಂದ್ಯದಲ್ಲಿ ಚೆಕ್ಕೇರ 53 ರನ್ ಗಳಿಂದ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 110 ರನ್ ಗಳನ್ನು ಗಳಿಸಿತು. ಓಡಿಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.
ಬೊಳಕಾರಂಡ (ಕೊಣಂಜಗೇರಿ) ಮತ್ತು ಅಜ್ಜೇಟಿರ ನಡುವಿನ ಪಂದ್ಯದಲ್ಲಿ ಬೊಳಕಾರಂಡ 7 ವಿಕೆಟ್ ಗಳಿಂದ ಗೆಲುವು ಕಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಜ್ಜೇಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಸೇರಿಸಿತು. ಬೊಳಕಾರಂಡ 4.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.
ಮಾಚಮಾಡ ಮತ್ತು ಮೋಟನಾಳಿರ ನಡುವಿನ ಪೈಪೋಟಿಯಲ್ಲಿ ಮೋಟನಾಳಿರ 42 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೋಟನಾಳಿರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 96 ರನ್ ಗಳನ್ನು ಗಳಿಸಿತು. ಮಾಚಮಾಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.
ಪಂದ್ಯAಡ ಮತ್ತು ಚೊಟ್ಟಂಗಡ ನಡುವಿನ ಪಂದ್ಯದಲ್ಲಿ ಪಂದ್ಯAಡ 4 ರನ್ ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂದ್ಯoಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿತು. ಚೊಟ್ಟಂಗಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಪುದಿಯೊಕ್ಕಡ ಮತ್ತು ಹಂಚೆಟ್ಟಿರ ನಡುವಿನ ಪಂದ್ಯದಲ್ಲಿ ಪುದಿಯೊಕ್ಕಡ ತಂಡಕ್ಕೆ 34 ರನ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪುದಿಯೊಕ್ಕಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 96 ರನ್ ಗಳನ್ನು ಗಳಿಸಿತು. ಹಂಚೆಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಸೋಲು ಕಂಡಿತು.