ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ

Apr 29, 2026 - 20:44
 0  124
ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ :  ಮೇ 1 ರಂದು ಸಮಾರೋಪ

ಮಡಿಕೇರಿ ಏ.29 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯ ಫೈನಲ್ಸ್ ಮತ್ತು ಸಮಾರೋಪ ಸಮಾರಂಭ ಮೇ 1 ರಂದು ನಡೆಯಲಿದೆ.

 ಬೇತ್ರಿ ಮುಕ್ಕಾಟಿರ ಪಟ್ಟೆದಾರ ಕಾಳಪ್ಪ ಹಾಗೂ ಕ್ರಿಕೆಟ್ ನಮ್ಮೆಯ ಅಧ್ಯಕ್ಷ ಸುರೇಶ್ ಪೆಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಸಾರಾ ಮಹೇಶ್ ಪಾಲ್ಗೊಳ್ಳಲಿದ್ದಾರೆ.

ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕರೂ ಆದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, OSPREY ಗ್ರೂಪ್ ನ ಮಾಚೆಟ್ಟಿರ ಜೆನಿತ್ ಅಯ್ಯಪ್ಪ, ಮೊಬಿಯಸ್ ಫೌಂಡೇಶನ್ ನ ಮಣವಟ್ಟಿರ ಮಧು ಬೋಪಣ್ಣ, ವಿಶೇಷ ಆಹ್ವಾನಿತರಾಗಿ INDUS ASSIST PRIVATE ಲಿಮಿಟೆಡ್ ನ ಎಸ್.ಬಾಲಚಂದ್ರ, ಕೊಡವ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಕೀತಿಯಂಡ ಕಾರ್ಸನ್ ಹಾಗೂ ಉಪಾಧ್ಯಕ್ಷ ಚೇರಂಡ ಕಿಶನ್ ಉಪಸ್ಥಿತರಿರುವರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0