ಬೆಟ್ಟಗೇರಿ:ಇಬ್ಬರು SSLC ವಿದ್ಯಾರ್ಥಿಗಳಿಗಿಲ್ಲ ಹಾಲ್ ಟಿಕೆಟ್
ಬೆಟ್ಟಗೇರಿ; ಇಬ್ಬರು SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸರುವ ಘಟನೆ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ತಮೀಮ್, ಪ್ರಥಮ್ ಪರೀಕ್ಷೆ ನಿರಾಕರಿಸಲ್ಪಟ್ಟ ವಿದ್ಯಾರ್ಥಿಗಳು. ಹಾಲ್ ಟಿಕೆಟ್ ಬಂದಿಲ್ಲ ಎಂದು ಶಾಲೆಯ ಸ್ಪಷ್ಟನೆ ನೀಡಿದ್ದಾರೆ. ಶಾಲೆಯ ಬಳಿ ಪೋಷಕರು, ಊರಿನವರ ಪ್ರತಿಭಟನೆ ನಡೆಸಿದ್ದಾರೆ. ಉದಯ ಶಾಲೆಗೆ ಅನುಮತಿಯೇ ಇಲ್ಲವೆಂದು ಪೋಷಕರ ಆರೋಪಿಸಿದ್ದು, ಶಿಕ್ಷಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದು,ಉದಯ ಶಾಲೆಗೆ ಅನುಮತಿ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಿರಾಕರಣೆಯಾದ ಇಬ್ಬರು ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯುವ ಅವಕಾಶ ನೀಡಲಾಗುವುದೆಂದು ಭರವಸೆ ನೀಡಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದರು.
What's Your Reaction?
Like
0
Dislike
0
Love
0
Funny
0
Angry
1
Sad
3
Wow
0
