ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಇಂದಿನ ವಿಜೇತ ತಂಡಗಳು
ಮಡಿಕೇರಿ ಏ.7 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.6ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು.
ಮೈದಾನ 1;
ಅಮ್ಮಣಿಚಂಡ ಮತ್ತು ಕಂಬೆಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಅಮ್ಮಣಿಚಂಡ 18 ರನ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಮ್ಮಣಿಚಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 85 ರನ್ ಗಳನ್ನು ಗಳಿಸಿತು. ಕಂಬೆಯಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು.
ಅಜ್ಜೆಟ್ಟಿರ ಮತ್ತು ಕೊಲ್ಲಿರ ನಡುವಿನ ಹಣಾಹಣಿಯಲ್ಲಿ ಅಜ್ಜೆಟ್ಟಿರ 3 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಅಜ್ಜೆಟ್ಟಿರ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 74 ರನ್ ಗಳನ್ನು ಗಳಿಸಿತು. ಕೊಲ್ಲಿರ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 71 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.
ಅಪ್ಪನೆರವಂಡ ಮತ್ತು ತಾತಂಡ (ಕುಕ್ಲೂರು) ತಂಡಗಳ ನಡುವಿನ ಪಂದ್ಯದಲ್ಲಿ ತಾತಂಡ 9 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಪ್ಪನೆರವಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿತು. ತಾತಂಡ 5.2 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು.
ಮುಕ್ಕಾಟಿರ (ಮೂವತ್ತೊಕ್ಲು) ಮತ್ತು ಅಲ್ಮಚಂಡ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡ 10 ವಿಕೆಟ್ ಗಳ ಗೆಲುವು ಸಾಧಿಸಿತು. ಟಾಸ್ ಸೋತ ಅಲ್ಮಚಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನತ್ತಿದ ಮುಕ್ಕಾಟಿರ 5.4 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 73 ರನ್ ಗಳನ್ನು ಸೇರಿಸಿ ಜಯಭೇರಿ ಬಾರಿಸಿತು.
ಮಣವಟ್ಟಿರ ಮತ್ತು ಪಾಸುರ ತಂಡಗಳ ನಡುವಿನ ಪಂದ್ಯದಲ್ಲಿ ಪಾಸುರ 12 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಸುರ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಗಳಿಸಿತು. ಮಣವಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನಷ್ಟೇ ಸೇರಿಸಲು ಸಾಧ್ಯವಾಯಿತು.
ಮಲ್ಲೇಂಗಡ ಮತ್ತು ಕುಂಡ್ಯೋಳಂಡ ತಂಡಗಳ ನಡುವಿನ ಪಂದ್ಯದಲ್ಲಿ ಮಲ್ಲೇಂಗಡ 8 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಂಡ್ಯೋಳಂಡ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 53 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಮಲ್ಲೇಂಗಡ 3.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿ ಗೆಲುವಿನ ನಗು ಬೀರಿತು.
ಓಡಿಯಂಡ ಮತ್ತು ಮಾಳೇಟಿರ (ಕುಕ್ಲೂರು) ನಡುವಿನ ಪಂದ್ಯದಲ್ಲಿ ಓಡಿಯಂಡ ತಂಡ 10 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಳೇಟಿರ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಗಳಿಸಿತು. ಓಡಿಯಂಡ ತಂಡ 4.5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 69 ರನ್ ಗಳನ್ನು ಸೇರಿಸಿ ಪಂದ್ಯವನ್ನು ಗೆದ್ದುಕೊಂಡಿತು.
ಮೈದಾನ 2;
ಚೆರುವಾಳಂಡ (ಪುಲ್ಲಿಮಕ್ಕಿ) ಮತ್ತು ಜಮ್ಮಡ ತಂಡಗಳ ನಡುವಿನ ಪಂದ್ಯದಲ್ಲಿ ಚೆರುವಾಳಂಡ 8 ವಿಕೆಟ್‌ಗಳ ಗೆಲುವು ದಾಖಲಿಸಿತು. ಜಮ್ಮಡ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 80 ರನ್ ಗಳನ್ನು ಮತ್ತು ಚೆರುವಾಳಂಡ 5.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 81 ರನ್ ಗಳನ್ನು ಸೇರಿಸಿತು.
ಮಂಡೇಪಂಡ ಮತ್ತು ಅಲ್ಲುಮಾಡ ನಡುವಿನ ಪಂದ್ಯದಲ್ಲಿ ಮಂಡೇಪಂಡ ತಂಡಕ್ಕೆ 8 ವಿಕೆಟ್ ಗಳ ಜಯ ಲಭಿಸಿತು. ಅಲ್ಲುಮಾಡ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 31 ರನ್ ಗಳನ್ನು ಮತ್ತು ಮಂಡೇಪಂಡ 2.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 34 ರನ್ ಗಳನ್ನು ಗಳಿಸಿತು.
ಪುಗ್ಗೇರ ಮತ್ತು ಕಳಕಂಡ ತಂಡಗಳ ನಡುವಿನ ಪಂದ್ಯದಲ್ಲಿ ಕಳಕಂಡ ತಂಡಕ್ಕೆ 10 ವಿಕೆಟ್ ಗಳ ಜಯ ಲಭಿಸಿತು. ಕಳಕಂಡ 1.4 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 41 ರನ್ ಗಳನ್ನು ಮತ್ತು ಪುಗ್ಗೇರ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಸೇರಿಸಿತು.
ಕೇಳೇಟಿರ ಮತ್ತು ಅಯ್ಯಮಾಡ ನಡುವಿನ ಪಂದ್ಯದಲ್ಲಿ ಅಯ್ಯಮಾಡ 31 ರನ್ ಗಳಿಂದ ಜಯ ಸಾಧಿಸಿತು. ಅಯ್ಯಮಾಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 88 ರನ್ ಗಳನ್ನು ಮತ್ತು ಕೇಳೇಟಿರ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಗಳಿಸಿತು.
ಮಲಚ್ಚಿರ ಮತ್ತು ಉಳುವಂಗಡ ತಂಡಗಳಲ್ಲಿ ಮಲಚ್ಚಿರ ಹಾಗೂ ಅಣ್ಣೀರ ಮತ್ತು ಚೆಯ್ಯಂಡ (ಬಲಮುರಿ) ತಂಡಗಳಲ್ಲಿ ಚೆಯ್ಯಂಡ ವಾಕ್ ಓವರ್ ಮೂಲಕ ಮುಂದಿನ ಸುತ್ತಿಗೆ ಅರ್ಹತೆ ಪಡೆದವು.